ಸೋಮವಾರ ಕೃಷ್ಣ ಜನ್ಮಾಷ್ಟಮಿ ಹಬ್ಬದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಹುರುಳಿ ಹಿಟ್ಟಿನಿಂದ ತಯಾರಿಸಿದ ಆಹಾರ ಪದಾರ್ಥ ಸೇವಿಸಿದ ಬಳಿಕ ಜನರಲ್ಲಿ ವಾಂತಿ, ತಲೆಸುತ್ತು ಮತ್ತು ಮೈ ನಡುಗುವಿಕೆ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮದ ಸುಮಾರು 60ಕ್ಕೂ ಅಧಿಕ ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹುರುಳಿ ಹಿಟ್ಟಿನಿಂದ ತಯಾರಿಸಿದ ಆಹಾರವನ್ನು ಗ್ರಾಮದ ಸ್ಥಳೀಯ ಅಂಗಡಿಯಿಂದ ಖರೀದಿಸಲಾಗಿತ್ತು ಎಂದು ರೋಗಿಯೊಂದಿಗೆ ಬಂದಿದ್ದ ಪರ್‌ಖಮ್ ಗ್ರಾಮದ ನಿವಾಸಿಯೊಬ್ಬರು ಹೇಳಿದ್ದಾರೆ.
ಸೋಮವಾರ ಮಧ್ಯರಾತ್ರಿ 1 ಗಂಟೆಗೆ ಸುಮಾರು 29 ರೋಗಿಗಳು ವಾಂತಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಇತರ ಕೆಲವು ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.