ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 4 ಏಪ್ರಿಲ್ 2024, 19:44 IST
Last Updated 4 ಏಪ್ರಿಲ್ 2024, 19:44 IST
ಅಕ್ಷರ ಗಾತ್ರ

ಭಾರತವು ಸೂಪರ್‌ ಪವರ್‌ ಆಗಲು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವ ಅಗತ್ಯವಿದೆ. ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಧೈರ್ಯ ತೋರಿದ್ದಾರೆ. ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟವು ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಲು ವಿಫಲವಾಗಿದೆ ಮತ್ತು ಅದಕ್ಕೆ ಯಾವುದೇ ಕಾರ್ಯಸೂಚಿ ಇಲ್ಲ. ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಆದರೆ, ವಿರೋಧ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ

-ಏಕನಾಥ ಶಿಂದೆ, ಮಹಾರಾಷ್ಟ್ರ ಮುಖ್ಯಮಂತ್ರಿ

ಭ್ರಷ್ಟಾಚಾರ, ನಿರುದ್ಯೋಗ ಮತ್ತು ಹಣದುಬ್ಬರದಿಂದ ಬೇಸತ್ತಿರುವ ಜನರು ದೇಶದಲ್ಲಿ ಬದಲಾವಣೆ ಬಯಸಿದ್ದಾರೆ. ಕೇಂದ್ರ ಸರ್ಕಾರವು ಮಹಿಳೆಯರು ಮತ್ತು ರೈತರ ವಿರುದ್ಧವಾಗಿದ್ದು, ಕೇಂದ್ರದ ಬಿಜೆಪಿ ಆಡಳಿತವನ್ನು ಬದಲಾಯಿಸಲು ಜನರು ಇಚ್ಛಿಸಿದ್ದಾರೆ. ಬಾಂಬೆ ಐಐಟಿಯಂತಹ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನಿಯೋಜನೆ ಮಾಡಿಕೊಳ್ಳಲು ಕಂಪನಿಗಳು ಮುಂದೆ ಬರುತ್ತಿಲ್ಲ. ಉದ್ಯೋಗ ಸೃಷ್ಟಿಯ ಕುರಿತು ಬಿಜೆಪಿ ಸರ್ಕಾರಕ್ಕಿರುವ ನಿರ್ಲಕ್ಷ್ಯವನ್ನು ಇದು ಎತ್ತಿ ತೋರಿಸುತ್ತಿದೆ

-ಸುಪ್ರಿಯಾ ಸುಳೆ, ಎನ್‌ಸಿಪಿ ಶರದ್‌ ಪವಾರ್‌ ಬಣದ ನಾಯಕಿ

ಸುಪ್ರಿಯಾ ಸುಳೆ
ಸುಪ್ರಿಯಾ ಸುಳೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT