ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಗೆ ದೇಶ ಮೊದಲು, ಚುನಾವಣೆಗೆ ಕೃಷಿ ಕಾಯ್ದೆ ರದ್ದುಗೊಳಿಸಿಲ್ಲ: ಸಾಕ್ಷಿ ಮಹಾರಾಜ್

Last Updated 21 ನವೆಂಬರ್ 2021, 4:25 IST
ಅಕ್ಷರ ಗಾತ್ರ

ಲಖನೌ: ಚುನಾವಣೆ ಉದ್ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿಲ್ಲ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

‘ಕಾಯ್ದೆಗಳಿಗೆ ಚುನಾವಣೆಗಳೊಂದಿಗೆ ಯಾವುದೇ ಸಂಬಂಧವಿಲ್ಲ. ಮೋದಿಯವರಿಗೆ ದೇಶವೇ ಮೊದಲು. ಕಾಯ್ದೆಗಳು ಬರಬಹುದು, ರದ್ದುಗೊಳಿಸಬಹುದು, ಮರು ರೂಪಿಸಬಹುದು. ಕಾಯ್ದೆಗಳಿಗಿಂತಲೂ ದೇಶವನ್ನೇ ಮೊದಲ ಆಯ್ಕೆಯನ್ನಾಗಿ ಮಾಡಿ ತಪ್ಪು ಉದ್ದೇಶಗಳಿಗೆ ಹೊಡೆತ ನೀಡಿದ್ದಕ್ಕಾಗಿ ಪ್ರಧಾನಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

ಸಾಕ್ಷಿ ಮಹಾರಾಜ್ ಹೇಳಿಕೆಯುಳ್ಳ ವಿಡಿಯೊವನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಕೇಂದ್ರವು ಕಳೆದ ವರ್ಷ ರೂಪಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ರೈತರ ಭಾರಿ ವಿರೋಧದ ಕಾರಣ ರದ್ದುಪಡಿಸುವುದಾಗಿ ಮೋದಿ ಅವರು ಶುಕ್ರವಾರ ಘೋಷಿಸಿದ್ದರು. ಕಾಯ್ದೆಗಳ ಬಗ್ಗೆ ಒಂದು ವರ್ಗದ ರೈತರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿರುವುದಕ್ಕೆ ದೇಶದ ಜನತೆ ಬಳಿ ಕ್ಷಮೆಯನ್ನೂ ಯಾಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT