ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ವಿದೇಶಿ ಭಯೋತ್ಪಾದಕನ ಹತ್ಯೆ

Last Updated 11 ನವೆಂಬರ್ 2022, 14:47 IST
ಅಕ್ಷರ ಗಾತ್ರ

ಶ್ರೀನಗರ: ಜೈಷ್‌–ಎ–ಮುಹಮ್ಮದ್ ಉಗ್ರ ಸಂಘಟನೆಯ ಒಬ್ಬ ವಿದೇಶಿ ಭಯೋತ್ಪಾದಕನನ್ನು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಯ ಸಿಬ್ಬಂದಿಶುಕ್ರವಾರ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮೃತ ಉಗ್ರನನ್ನು ಕಮ್ರಾನ್‌ ಭಾಯ್‌ ಅಲಿಯಾಸ್‌ ಹನೀಸ್‌ ಎಂದು ಗುರುತಿಸಲಾಗಿದೆ’ ಎಂದು ಕಾಶ್ಮೀರದ ಎಡಿಜಿಪಿ ಟ್ವೀಟ್‌ ಮಾಡಿದ್ದಾರೆ.

‘ವಿದೇಶಿ ಉಗ್ರರ ಹತ್ಯೆಯ ಹೆಚ್ಚಳವು, ಭಯೋತ್ಪಾದನೆಗಾಗಿ ಸ್ಥಳೀಯ ಉಗ್ರರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಕಡಿಮೆಯಾಗಿದೆ ಎಂಬುದನ್ನು ತೋರಿಸುತ್ತದೆ. ಭಯೋತ್ಪಾದನೆಯನ್ನು ಜೀವಂತವಾಗಿರಿಸಲು ಪಾಕಿಸ್ತಾನದ ಗೂಢಚಾರಿ ಸಂಸ್ಥೆಯಾದ ಐಎಸ್‌ಐ ವಿದೇಶಿಯರನ್ನು ಕಳುಹಿಸುತ್ತಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT