ನವದೆಹಲಿ: ಮೋದಿ ಸರ್ಕಾರ ಪರಿಸರ ಸಂರಕ್ಷಣೆ ಸಂಬಂಧಿಸಿದ ವಿಷಯದಲ್ಲಿ ಸಿನಿಕತನದ ಕುತಂತ್ರ ಪ್ರದರ್ಶಿಸುತ್ತಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಸರ್ಕಾರವು 1980ರ ಅರಣ್ಯ (ಸಂರಕ್ಷಣಾ) ಕಾಯ್ದೆ ಮತ್ತು ಅರಣ್ಯ ಸಂರಕ್ಷಣಾ ನಿಯಮಗಳ (2022) ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

‘ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂದು ತಿದ್ದುಪಡಿಯಲ್ಲಿದೆ. ಸರ್ಕಾರದ ಈ ನಿರ್ಧಾರದಿಂದ ಬೆಟ್ಟಗಳಲ್ಲಿನ ಅಕ್ರಮ ಗಣಿಗಾರಿಕೆಗೆ ಮುಕ್ತ ಆಹ್ವಾನ ನೀಡಿದಂತಾಗಿದೆ’ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.

‘ಅರಾವಳಿ ಶ್ರೇಣಿಯು ಗುಜರಾತ್ನಿಂದ ರಾಜಸ್ತಾನದ ಮೂಲಕ ಹರಿಯಾಣದವರೆಗೆ ವ್ಯಾಪಿಸಿದೆ. ಇದು ಭಾರತದ ಭೌಗೋಳಿಕ ಮತ್ತು ಇತಿಹಾಸದಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಕ್ರಮ ಗಣಿಗಾರಿಕೆಯಿಂದ ಈಗಾಗಲೇ ನಾಶವಾಗಿರುವ ಈ ಬೆಟ್ಟಗಳ ಮರಣಶಾಸನಕ್ಕೆ ಸಹಿ ಹಾಕಲು ಮೋದಿ ಸರ್ಕಾರ ಮುಂದಾಗಿದೆ’ ಎಂದು ಅವರು ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.