ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಪಾಲಿಕೆ ಚುನಾವಣೆ: ಎಎಪಿ ಮಾಜಿ ಶಾಸಕ ಸುರೇಂದ್ರ ಸಿಂಗ್ ಬಿಜೆಪಿಗೆ ಸೇರ್ಪಡೆ

Last Updated 29 ನವೆಂಬರ್ 2022, 13:25 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಆಮ್‌ ಆದ್ಮಿ ಪಕ್ಷದ (ಎಎಪಿ) ಮಾಜಿ ಶಾಸಕ ಸುರೇಂದರ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

2020ರ ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ದೊರೆತಿರಲಿಲ್ಲ. ಇದರಿಂದ ಬೇಸತ್ತಿದ್ದ ಅವರು ಎಎಪಿಗೆ ರಾಜೀನಾಮೆ ಸಲ್ಲಿಸಿದ್ದರು.

ಇದೀಗ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸುರೇಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ‌

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT