ಶ್ರೀನಿವಾಸನ್ ಅವರು ಮೈಸೂರಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಶಿಕ್ಷಣವನ್ನು ಪಡೆದಿದ್ದಾರೆ. ಭೌತಶಾಸ್ತ್ರವು ಅವರ ನೆಚ್ಚಿನ ವಿಷಯವಾದರೂ ಅವರು ಸರ್ ಎಂ. ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್‌ಗೆ ಸೇರಿಕೊಂಡರು. 1950ರಲ್ಲಿ ಅವರು ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮುಗಿಸಿದರು. 1952ರಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಅವರು, 1954ರಲ್ಲಿ ಕೆನಡಾದ ಮೆಕ್‌ಗಿಲ್ ವಿಶ್ವವಿದ್ಯಾಲಯದಿಂದ ಟರ್ಬೈನ್ ತಂತ್ರಜ್ಞಾನ ವಿಷಯದಲ್ಲಿ ಪಿಎಚ್.ಡಿ ಪಡೆದುಕೊಂಡರು.