ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಡಿಪಿ ಕಚೇರಿ ಮೇಲೆ ದಾಳಿ ಪ್ರಕರಣ: ಮಾಜಿ ಸಂಸದ ನಂದಿಗಂ ಸುರೇಶ್ ಬಂಧನ

Published 5 ಸೆಪ್ಟೆಂಬರ್ 2024, 10:54 IST
Last Updated 5 ಸೆಪ್ಟೆಂಬರ್ 2024, 10:54 IST
ಅಕ್ಷರ ಗಾತ್ರ

ಅಮರಾವತಿ/ಹೈದರಾಬಾದ್: 2021ರಲ್ಲಿ ಟಿಡಿಪಿ ಕಚೇರಿ ಮೇಲೆ ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ಸಿಪಿಯ ಹಿರಿಯ ನಾಯಕ ಮತ್ತು ಬಾಪಟ್ಲಾ ಮಾಜಿ ಸಂಸದ ನಂದಿಗಂ ಸುರೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಹೈದರಾಬಾದ್‌ನ ಹೊರವಲಯದಲ್ಲಿ ನಂದಿಗಂ ಸುರೇಶ್ ಅವರನ್ನು ಬಂಧಿಸಲಾಗಿದೆ ಎಂದು ಗುಂಟೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಸತೀಶ್ ಹೇಳಿದ್ದಾರೆ.

2021ರ ಅಕ್ಟೋಬರ್‌ನಲ್ಲಿ ಆಗಿನ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಟಿಡಿಪಿ ನಾಯಕ ಪಟ್ಟಾಭಿರಾಮ್ ಕೊಮ್ಮರೆಡ್ಡಿ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಬೆನ್ನಲ್ಲೇ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಮಂಗಳಗಿರಿಯ ಟಿಡಿಪಿ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿದ್ದರು.

ಬಾಪಟ್ಲಾ ಮಾಜಿ ಸಂಸದರನ್ನು ಇಂದು (ಗುರುವಾರ) ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸತೀಶ್ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಬಗ್ಗೆ ನಿಗಾವಗಹಿಸಲಾಗಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT