ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಯಿಬಾಸಾ ಹಗರಣದಲ್ಲಿ ಜಾಮೀನು ಸಿಕ್ಕರೂ ಲಾಲುಗೆ ಮುಂದುವರಿದ ಜೈಲು ವಾಸ

Last Updated 9 ಅಕ್ಟೋಬರ್ 2020, 10:13 IST
ಅಕ್ಷರ ಗಾತ್ರ

ರಾಂಚಿ: ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣದಲ್ಲಿ ಆರ್‌ಜೆಡಿ ಪಕ್ಷದ ನಾಯಕ ಲಾಲು ಪ್ರಸಾದ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಲಾಲು ಹಲವು ಪ್ರಕರಣಗಳಲ್ಲಿ ದೋಷಿಯಾಗಿದ್ದಾರೆ. ದುಮ್ಕಾ ಖಜಾನೆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಇರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ.

ಸಿಬಿಐ ಪರ ವಕೀಲರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿತ್ತು.

1992–93ರಲ್ಲಿ ಚಾಯಿಬಾಸಾ ಖಜಾನೆಯಿಂದ ₹33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲು ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆ ಅವಧಿಯಲ್ಲಿ ಲಾಲು ಅವರೇ ಬಿಹಾರದ ಮುಖ್ಯಮುಂತ್ರಿ ಆಗಿದ್ದರು.

72 ವರ್ಷ ವಯಸ್ಸಿನ ಲಾಲು ಅವರು ರಾಂಚಿಯಲ್ಲಿರುವ ರಾಜೇಂದ್ರ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ರಿಮ್ಸ್‌) ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT