ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಮಲ್ಲು ರವಿ ನೇಮಕ

Published 21 ಜನವರಿ 2024, 5:53 IST
Last Updated 21 ಜನವರಿ 2024, 5:53 IST
ಅಕ್ಷರ ಗಾತ್ರ

ಹೈದರಾಬಾದ್: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಮಲ್ಲು ರವಿ ಅವರನ್ನು ದೆಹಲಿಯಲ್ಲಿ ತೆಲಂಗಾಣ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ನೇಮಿಸಲಾಗಿದೆ.

ಅವಿಭಜಿತ ಆಂಧ್ರಪ್ರದೇಶದಲ್ಲಿ ದಿ.ವೈ.ಎಸ್.ರಾಜಶೇಖರ ರೆಡ್ಡಿ ಮುಖ್ಯಮಂತ್ರಿಯಾಗಿದ್ದಾಗ ರವಿ ಅವರು ಇದೇ ಹುದ್ದೆಯನ್ನು ಅಲಂಕರಿಸಿದ್ದರು.

ಕಾಂಗ್ರೆಸ್ ಮುಖಂಡರಾದ ವೆಂ. ನರೇಂದ್ರ ರೆಡ್ಡಿ, ಮೊಹಮ್ಮದ್ ಅಲಿ ಶಬ್ಬೀರ್ ಮತ್ತು ಹರಕರ ವೇಣುಗೋಪಾಲ್ ರಾವ್ ಅವರನ್ನು ವಿವಿಧ ಇಲಾಖೆಗಳಲ್ಲಿ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ಅವರು ಜನವರಿ 20ರಂದು ಸರ್ಕಾರಿ ಆದೇಶ ಹೊರಡಿಸಿದ್ದರು. ನೇಮಕಾತಿಗಳ ಕುರಿತು ಭಾನುವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಸಿಎಂ ರೇವಂತ್ ರೆಡ್ಡಿ ಅವರ ನಿಕಟವರ್ತಿ ವೆಂ.ನರೇಂದ್ರ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸಾರ್ವಜನಿಕ ವ್ಯವಹಾರಗಳ ಸಲಹೆಗಾರರನ್ನಾಗಿ, ಮೊಹಮ್ಮದ್ ಅಲಿ ಶಬ್ಬೀರ್ ಅವರನ್ನು ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಸಲಹೆಗಾರರಾಗಿ ನೇಮಿಸಲಾಗಿದೆ.

ಶಬ್ಬೀರ್ ಅವರು ಈ ಹಿಂದೆ ಸಚಿವರಾಗಿ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ವೇಣುಗೋಪಾಲ್ ರಾವ್ ಅವರನ್ನು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಸಲಹೆಗಾರರಾಗಿ ಆಯ್ಕೆ ಮಾಡಲಾಗಿದೆ.

ನರೇಂದ್ರ ರೆಡ್ಡಿ, ಶಬ್ಬೀರ್ ಮತ್ತು ವೇಣುಗೋಪಾಲ್ ರಾವ್ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT