ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಆರ್‌ಡಿಒ ಮಾಜಿ ಮುಖ್ಯಸ್ಥ ಅರುಣಾಚಲಂ ನಿಧನ

Published 16 ಆಗಸ್ಟ್ 2023, 22:07 IST
Last Updated 16 ಆಗಸ್ಟ್ 2023, 22:07 IST
ಅಕ್ಷರ ಗಾತ್ರ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮಾಜಿ ಮುಖ್ಯಸ್ಥ ವಿ.ಎಸ್‌. ಅರುಣಾಚಲಂ (87) ಬುಧವಾರ ಅಮೆರಿಕದಲ್ಲಿ ನಿಧನರಾಗಿದ್ದಾರೆ.

ಬಾಬಾ ಪರಮಾಣು ಸಂಶೋಧನಾ ಕೇಂದ್ರ, ನ್ಯಾಷನಲ್‌ ಏರೊನಾಟಿಕಲ್‌ ಲ್ಯಾಬೊರೇಟರಿ ಮತ್ತು ಡಿಫೆನ್ಸ್‌ ಮೆಟಲರ್ಜಿಕಲ್ ರಿಸರ್ಚ್‌ ಲ್ಯಾಬೊರೇಟರಿಯಲ್ಲಿ ಸೇವೆ ಸಲ್ಲಿಸಿದ್ದರು. 

1982–92ರಲ್ಲಿ ರಕ್ಷಣಾ ಸಚಿವರ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು. ಎಂಜಿನಿಯರಿಂಗ್‌ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಅವರು ಸಲ್ಲಿಸಿದ್ದ ಸೇವೆ ಪರಿಗಣಿಸಿ ಶಾಂತಿ ಸ್ವರೂಪ್‌ ಭಟ್ನಾಗರ್‌, ಪದ್ಮಭೂಷಣ, ಪದ್ಮ ವಿಭೂಷಣ ಪುರಸ್ಕಾರಕ್ಕೆ ಪಾತ್ರರಾಗಿದ್ದರು.

‘ಅರುಣಾಚಲಂ ಅವರು ರಕ್ಷಣೆ, ತಂತ್ರಜ್ಞಾನ ಮತ್ತು ಪರಮಾಣು ವಿಷಯಗಳಲ್ಲಿ ಅನೇಕರಿಗೆ ಮಾರ್ಗದರ್ಶಕರಾಗಿದ್ದರು. ಅವರೊಂದಿಗೆ ಕೆಲಸ ಮಾಡುವ ಸುಯೋಗ ನನಗೆ ಸಿಕ್ಕಿತು. ವಿಶೇಷವಾಗಿ ಭಾರತ- ಅಮೆರಿಕ ಸಂಬಂಧದಲ್ಲಿ 1986ರಲ್ಲಿ ಅಮೆರಿಕ ಪ್ರವಾಸ ಕೈಗೊಂಡಿದ್ದು ಅಮೂಲ್ಯವಾದ ನೆನಪುಗಳಲ್ಲಿ ಒಂದಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್  ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT