ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಇನ್ನಿಲ್ಲ

Last Updated 7 ಆಗಸ್ಟ್ 2019, 10:15 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಮಾಜಿ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಅವರು ಮಂಗಳವಾರ ನಿಧನರಾಗಿದ್ದಾರೆ.

ಹಿರಿಯ ನಾಯಕಿಯ ಜೀವನ–ಸಾಧನೆ ತಿಳಿಯಲುಸುಷ್ಮಾ ಸ್ವರಾಜ್‌ ನೆನಪುಲಿಂಕ್ ಕ್ಲಿಕ್ಕಿಸಿ

ಮಂಗಳವಾರ ರಾತ್ರಿ ಅವರ ಆರೋಗ್ಯದಲ್ಲಿ ದಿಢೀರ್‌ ಏರುಪೇರು ಕಾಣಿಸಿಕೊಂಡಿತು. ಹೀಗಾಗಿ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‌

‘ಸುಷ್ಮಾ ಸ್ವರಾಜ್‌ ಉತ್ತಮ ಸಂಸದೀಯಪಟು. ಪಕ್ಷದಲ್ಲಿ ಅವರುಮೆಚ್ಚುಗೆ ಹಾಗೂಪೂಜನೀಯಸ್ಥಾನ ಪಡೆದಿದ್ದರು. ಬಿಜೆಪಿಯ ಸಿದ್ಧಾಂತದ ವಿಚಾರದಲ್ಲಿ ಅವರು ಯಾವುದಕ್ಕೂರಾಜಿಯಾಗುತ್ತಿರಲಿಲ್ಲ’ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ದಿಢೀರ್‌ ಹೃದಯಸ್ತಂಭನ ಉಂಟಾಗಿ ಅವರ ಆರೋಗ್ಯ ಸ್ಥಿತಿಗಂಭೀರವಾದ ಕಾರಣ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಬಿಜೆಪಿಯ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸುಷ್ಮಾಸ್ವರಾಜ್‌ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. ‘ಸಹೋದರಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ತೀವ್ರ ನೋವುಂಟಾಗಿದೆ.ಅವರನ್ನು ನೋಡಿದ ತಕ್ಷಣ ಎಲ್ಲರಲ್ಲೂ ತಾಯಿ ಮನೋಭಾವ ಮೂಡುತಿತ್ತು .ಆಕೆ ಅತೀ ಚಿಕ್ಕ ವಯಸ್ಸಿನಲ್ಲೇ ಹರಿಯಾಣ ರಾಜ್ಯದಲ್ಲಿ ಸಂಪುಟ ದರ್ಜೆ ಸಚಿವೆ ಆಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು.ಈ ದೇಶದ ಎರಡನೇ ಮಹಿಳಾ ವಿದೇಶಾಂಗ ಸಚಿವೆಯಾಗಿಯೂ ಉತ್ತಮ ಕಾರ್ಯ ನಿರ್ವಹಿಸಿದ್ದರು.ಸುಷ್ಮಾ ನಿಧನದಿಂದ ನಮ್ಮ ದೇಶ ಒಬ್ಬ ಧೈರ್ಯವಂತೆ ಹಾಗೂ ಮಾತೃ ಹೃದಯಿ ಹೆಣ್ಣು ಮಗಳನ್ನ ಕಳೆದು ಕೊಂಡಿದ್ದೀವಿ.ಅವರ ನಿಧನದಿಂದ ರಾಷ್ಟ್ರಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿಮತ್ತುಅವರ ಕುಟುಂಬಕ್ಕೆ ಹಾಗು ಅವರ ಅಪಾರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ’ ಎಂದಿದ್ದಾರೆ.

ಬಿಜೆಪಿ ಹಿರಿಯ ನಾಯಕಿಸುಷ್ಮಾಸ್ವರಾಜ್‌ ಅವರ ನಿಧನಕ್ಕೆಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.ಕೇಂದ್ರದ ಮಾಜಿ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಶ್ರೀಮತಿ ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ತಿಳಿದು ದು:ಖವಾಯಿತು. ಸ್ವಸಾಮಾರ್ಥ್ಯದಿಂದ ರಾಜಕೀಯವಾಗಿ ಎತ್ತರೆತ್ತರಕ್ಕೆ ಬೆಳೆಯುತ್ತಿದ್ದಾಗಲೇ ಅವರ ಬದುಕಿನ ಪಯಣ ಹಠಾತ್ತನೆ ಕೊನೆಗೊಂಡಿದ್ದು ವಿಷಾದನೀಯ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT