ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

Published 28 ಮಾರ್ಚ್ 2024, 10:12 IST
Last Updated 28 ಮಾರ್ಚ್ 2024, 10:12 IST
ಅಕ್ಷರ ಗಾತ್ರ

ಚಂಡೀಗಢ: ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್‌ ಅವರು ಕಾಂಗ್ರೆಸ್‌ ತೊರೆದು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡರು.

ಇತ್ತಿಚೆಗಷ್ಟೆ ಸಾವಿತ್ರಿ ಅವರ ಪುತ್ರ, ಉದ್ಯಮಿ ನವೀನ್‌ ಜಿಂದಾಲ್‌ ಅವರು ಕೂಡ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು.

ಹಿಸ್ಸಾರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿತ್ರಿ ಅವರು ಬಿಜೆಪಿಗೆ ಸೇರಿದ್ದಾರೆ. ಈ ವೇಳೆ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ, ಮಾಜಿ ಮುಖ್ಯಮಂತ್ರಿ ಮನೋಹರ್‌ಲಾಲ್‌ ಖಟ್ಟರ್‌ ಸೇರಿದಂತೆ ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಸಾವಿತ್ರಿ ಜಿಂದಾಲ್‌ ಅವರು ಈ ವರ್ಷದ ಫೋರ್ಬ್ಸ್‌ನ ಪಟ್ಟಿಯಲ್ಲಿ ದೇಶದ ಶ್ರೀಮಂತ ಮಹಿಳೆ ಎನ್ನುವ ಸ್ಥಾನ ಪಡೆದಿದ್ದರು. ಅವರ ಆಸ್ತಿಯ ನಿವ್ವಳ ಮೊತ್ತ  29.1 ಬಿಲಿಯನ್ ಅಮೆರಿಕನ್ ಡಾಲರ್‌ ಎಂದು ಹೇಳಲಾಗಿದೆ.

ಈ ಹಿಂದೆ ಕಾಂಗ್ರೆಸ್‌ನ ಭೂಪಿಂದರ್‌ ಸಿಂಗ್‌ ಹೂಡಾ ಸರ್ಕಾರದಲ್ಲಿ ಸಾವಿತ್ರಿ ಅವರು ಸಚಿವೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT