ಜಮ್ಮು: ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಮುಫ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ಅವಘಡದ ಸಂತ್ರಸ್ತರನ್ನು ಭೇಟಿ ಮಾಡಲು ಖಾನಾಬಲ್ಗೆ ತೆರಳುತ್ತಿದ್ದ ವೇಳೆ ಅನಂತ್ನಾಗ್ ಜಿಲ್ಲೆಯ ಸಂಗಂ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪಿಡಿಪಿ ಮಾಧ್ಯಮ ವಿಭಾಗ, ‘ಅನಂತ್ನಾಗ್ ಜಿಲ್ಲೆಗೆ ತೆರಳುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಪಿಡಿಪಿ ಮುಖ್ಯಸ್ಥೆ ಮತ್ತು ಅವರ ಭದ್ರತಾ ಅಧಿಕಾರಿಗಳು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ತಿಳಿಸಿದೆ.

ಅಪಘಾತದಲ್ಲಿ ಮುಫ್ತಿ ಅವರಿಗೆ ಸೇರಿದ ಸ್ಕಾರ್ಪಿಯೊ ಕಾರಿನ ಮುಂದಿನ ಭಾಗ ನುಜ್ಜುಗುಜ್ಜಾಗಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಅಪಘಾತದ ಬೆನ್ನಲ್ಲೇ ಸಂತ್ರಸ್ತರನ್ನು ಭೇಟಿಯಾಗಲು ಬೇರೊಂದು ಕಾರಿನಲ್ಲಿ ಮುಫ್ತಿ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.