ನವದೆಹಲಿ: ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ಅವರು ಇಂದು ನಿಧನರಾದರು.

ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್ನಲ್ಲಿ ದಾಖಲಿಸಲಾಗಿತ್ತು.

ಸಿಂಗ್ ಅವರು 2004 ರಿಂದ 2014ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.

ಈ ಹಿಂದೆ ಕೋವಿಡ್ಗೂ ಒಳಗಾಗಿದ್ದ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ವಿನಮ್ರತೆ, ಪಾಂಡಿತ್ಯದಿಂದ ಎಲ್ಲರ ಗೌರವಕ್ಕೆ ಪಾತ್ರರಾದ ಹಾಗೂ ಮಿತಭಾಷಿಯೂ ಆದ ಡಾ.ಮನಮೋಹನ್ ಸಿಂಗ್ ಅವರು 1990ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿದ್ದರು. ಹೀಗಾಗಿ ಅವರನ್ನು ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಹೆಸರು ಕರೆಯುತ್ತಾರೆ.

ಪಿ.ವಿ.ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಂತರ, 2004ರಿಂದ 2014ರ ವರೆಗೆ ಪ್ರಧಾನಿಯಾಗಿದ್ದರು.

ಅಸ್ಸಾಂನಿಂದ ಐದು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಅಲ್ಪಾವಧಿಗೆ ರಾಜಸ್ಥಾನದಿಂದ ಆಯ್ಕೆಯಾಗಿ ಮೇಲ್ಮನೆ ಪ್ರವೇಶಿಸಿದ್ದರು. 1998ರ ಮಾರ್ಚ್ 21ರಿಂದ 2004ರ ಮೇ 21ರ ವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.
.ಮನಮೋಹನ್ ಸಿಂಗ್: ಸಂಸದೀಯ ಪಯಣ ಮುಗಿಸಿದ ಆರ್ಥಿಕ ಸುಧಾರಣೆಗಳ ಹರಿಕಾರ.ಮನಮೋಹನ್ ಸಿಂಗ್ ನಿವೃತ್ತಿ: ರಾಜ್ಯಸಭೆಯಲ್ಲಿ 33 ವರ್ಷಗಳ ಅವಧಿ ಇಂದಿಗೆ ಕೊನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.