ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ | ಶಾಸಕರಾಗಿ ಕೆಸಿಆರ್‌ ಪ್ರಮಾಣ

Published 1 ಫೆಬ್ರುವರಿ 2024, 14:44 IST
Last Updated 1 ಫೆಬ್ರುವರಿ 2024, 14:44 IST
ಅಕ್ಷರ ಗಾತ್ರ

ಹೈದರಾಬಾದ್‌: ಬಿಆರ್‌ಎಸ್‌ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರು ತೆಲಂಗಾಣ ವಿಧಾನಸಭಾ ಶಾಸಕರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೆಸಿಎಆರ್‌ ಅವರು ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಗಜ್ವೆಲ್ ಕ್ಷೇತ್ರದಿಂದ ಚುನಾಯಿತರಾಗಿದ್ದು, ಗುರುವಾರ ಸ್ಪೀಕರ್‌ ಗದ್ದಮ್‌ ಪ್ರಸಾದ್‌ ಕುಮಾರ್‌ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸಭೆಯ ವಿರೋಧಪಕ್ಷದ ನಾಯಕನಾಗಿಯೂ ಕೆಸಿಆರ್‌ ಕಾರ್ಯನಿರ್ವಹಿಸಲಿದ್ದಾರೆ.

ತೆಲಂಗಾಣ ವಿಧಾನಸಭೆಯ ಚುನಾಯಿತ ಪ್ರತಿನಿಧಿಗಳೆಲ್ಲರೂ ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಆ ಸಮಯದಲ್ಲಿ ಕೆಸಿಆರ್‌ ಅವರು ತೊಡೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾರಣ ಪ್ರಮಾಣವಚನ ಸ್ವೀಕರಿಸಿರಲಿಲ್ಲ.

ಇದೀಗ ಗುಣಮುಖರಾಗಿರುವ ಕೆಸಿಆರ್ ಅವರು ಮುಂದಿನ ಲೋಕಸಭೆ ಚುನಾವಣೆ ದೃಷ್ದಿಯಿಂದ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT