ಸಹಾರನಪುರ (ಉತ್ತರ ಪ್ರದೇಶ): ಕೇಂದ್ರದ ಮಾಜಿ ಸಚಿವ ರಶೀದ್ ಮಸೂದ್ (73) ಅವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು.

ಕೋವಿಡ್–19ನಿಂದ ಗುಣಮುಖರಾಗಿದ್ದ ಅವರು ಮತ್ತೆ ಅನಾರೋಗ್ಯಕ್ಕೀಡಾದ ಕಾರಣ, ರೂರ್‌ಕಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು ಎಂದು ಅವರ ಸಹೋದರನ ಮಗ ಇಮ್ರಾನ್ ಮಸೂದ್ ತಿಳಿಸಿದರು.

‘ಇತ್ತೀಚೆಗೆ ರಶೀದ್ ಅವರಿಗೆ ಕೋವಿಡ್–19 ದೃಢಪಟ್ಟಿತ್ತು. ದೆಹಲಿಯ ಆಸ್ಪತ್ರೆಯೊಂದರಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಗುಣಮುಖರಾಗಿ ಮರಳಿದ್ದ ಅವರು ಸಹಾರನಪುರಕ್ಕೆ ಮರಳಿದ್ದರು. ಆದರೆ ಕೆಲ ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿತ್ತು’ ಎಂದು ಇಮ್ರಾನ್ ತಿಳಿಸಿದರು.

ಸಹಾರನಪುರ ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ರಶೀದ್, ರಾಜ್ಯಸಭೆಯ ಸದಸ್ಯರಾಗಿಯೂ ಕೆಲ ಅವಧಿಗೆ ಕಾರ್ಯನಿರ್ವಹಿಸಿದ್ದರು. ಜನತಾದಳ ಅಭ್ಯರ್ಥಿಯಾಗಿ 1989ರ ಲೋಕಸಭೆ ಚುನಾವಣೆ ಗೆದ್ದಿದ್ದ ಅವರು, ಅಂದಿನ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.