ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಭುವನ್ ಚಂದ್ರ ಖಂಡೂರಿ ಅವರು ಮಂಗಳವಾರ ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೇನಾಧಿಕಾರಿಯಾಗಿದ್ದ (ಮೇಜರ್ ಜನರಲ್) ಖಂಡೂರಿ ಅವರು ನಿವೃತ್ತಿ ಬಳಿಕ ರಾಜಕೀಯ ಪ್ರವೇಶಿಸಿದ್ದರು. ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2007ರಿಂದ 2009ರವರೆಗೆ ಮತ್ತು 2011ರಿಂದ 2012ರವರೆಗೆ ಎರಡು ಅವಧಿಗೆ ಸೇವೆ ಸಲ್ಲಿಸಿದ್ದರು.

ಖಂಡೂರಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದ್ದರು ಮತ್ತು ರಾಜ್ಯದಲ್ಲಿ ಪಾರದರ್ಶಕ ಹಾಗೂ ಶಿಸ್ತುಬದ್ಧ ಆಡಳಿತಕ್ಕೆ ಬಲವಾದ ಅಡಿಪಾಯ ಹಾಕಿದ್ದರು.

ಜನರಲ್ ಖಂಡೂರಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.