ನವದೆಹಲಿ: ಹೈದರಾಬಾದ್ನಲ್ಲಿ ನಡೆದಿದ್ದ ಫಾರ್ಮುಲಾ ಇ–ರೇಸ್ಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 16ರಂದು ವಿಚಾರಣೆಗೆ ಹಾಜರಾಗುವಂತೆ ಭಾರತ್ ರಾಷ್ಟ್ರ ಸಮಿತಿ ನಾಯಕ ಕೆ.ಟಿ.ರಾಮರಾವ್ ಮತ್ತು ಇತರೆ ಕೆಲವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ನೀಡಿದೆ.

ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ದೂರು ಆಧರಿಸಿ, ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪುತ್ರ, ಬಿಆರ್ಎಸ್ ಕಾರ್ಯಾಧ್ಯಕ್ಷ ರಾಮರಾವ್ ಅವರಿಗೆ ಜ.7ರಂದು ಹೇಳಿಕೆ ದಾಖಲಿಸಲು ಹಾಜರಾಗುವಂತೆ ಸೂಚಿಸಲಾಗಿತ್ತು.

ಫಾರ್ಮುಲಾ ಇ-ರೇಸ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಕೆ.ಟಿ. ರಾಮರಾವ್ ಸಲ್ಲಿಸಿದ್ದ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಸೋಮವಾರ ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.