ಮೃತರನ್ನು ಮಧ್ಯಪ್ರದೇಶದ ಸಿಪಾಯಿ ಪ್ರದೀಪ್ ಪಟೇಲ್, ಇಂಫಾಲ್ ನಿವಾಸಿ ಪೀಟರ್, ಹರಿಯಾಣ ನಿವಾಸಿ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ತಂಗಪಾಂಡಿ ಎಂದು ಗುರುತಿಸಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸೇನೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.