ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೇಘಾಲಯ: ಪೂರ್ವ ಜೈನ್ತಿಯಾದ ಕಾಡಿನಲ್ಲಿ 4 ಮೃತದೇಹಗಳು ಪತ್ತೆ

Published 6 ಜುಲೈ 2024, 10:24 IST
Last Updated 6 ಜುಲೈ 2024, 10:24 IST
ಅಕ್ಷರ ಗಾತ್ರ

ಶಿಲ್ಲಾಂಗ್‌: ಮೇಘಾಲಯದ ಪೂರ್ವ ಜೈನ್ತಿಯಾ ಜಿಲ್ಲೆಯ ಸಮೀಪದ ಹಳ್ಳಿಯೊಂದರಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕೈ ಕಾಲು ಕಟ್ಟಿ ಹಾಕಿದ್ದ್ ಸ್ಥಿತಿಯಲ್ಲಿ ಹಾಗೂ ಕುತ್ತಿಗೆ ಮೇಲೆ ಗಾಯದ ಗುರುತುಗಳಿರುವ ನಾಲ್ಕು ಮೃತದೇಹಗಳು ಉಂಪ್ಲೆಂಗ್ ಗ್ರಾಮದ ಹೊರವಲಯದಲ್ಲಿರುವ ಕಾಡಿನಲ್ಲಿ ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

ಶನಿವಾರ ಬೆಳಿಗ್ಗೆ ಕಾರ್ಮಿಕರು ಮೃತ ದೇಹಗಳನ್ನು ಪತ್ತೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಿರಿ ಪ್ರಸಾದ್‌ ತಿಳಿಸಿದ್ದಾರೆ.

ಮೃತರು ಹೊರ ರಾಜ್ಯದವರು ಎಂಬ ಶಂಕೆ ವ್ಯಕ್ತವಾಗಿದೆ. ಸೂಕ್ತ ತನಿಖೆಯ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಲ್ಲಿಯೇ ಹತ್ಯೆ ಮಾಡಲಾಗಿದೆಯೇ ಅಥವಾ ಬೇರೆಡೆ ಕೊಂದು ಶವಗಳನ್ನು ಇಲ್ಲಿಗೆ ತಂದು ಹಾಕಲಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT