ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಬೆಂಕಿ ಆಕಸ್ಮಿಕ: ನಾಲ್ವರ ಸಜೀವ ದಹನ

Published 18 ಜನವರಿ 2024, 20:11 IST
Last Updated 18 ಜನವರಿ 2024, 20:11 IST
ಅಕ್ಷರ ಗಾತ್ರ

ನವದೆಹಲಿ: ವಾಯವ್ಯ ದೆಹಲಿ ಪಿತಾಂಪುರ ಪ್ರದೇಶದ ಮನೆಯೊಂದರಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಜೀವ ದಹನವಾಗಿದ್ದು, ಒಬ್ಬರು ಕಾಣೆಯಾಗಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಕಾಣಿಸಿಕೊಂಡ ಬಗ್ಗೆ ಪಿತಾಂಪುರದ ಝಡ್‌ಪಿ ಬ್ಲಾಕ್‌ನಿಂದ ರಾತ್ರಿ 8 ಗಂಟೆಗೆ ಕರೆ ಬಂದಿತ್ತು. ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನಗಳನ್ನು ಕಳುಹಿಸಿದ್ದು, ಬೆಂಕಿ ನಂದಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ನಡೆದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT