ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ಅಂಗಡಿ ನೆಲಸಮ: ನಾಲ್ವರು ಪೊಲೀಸರ ಅಮಾನತು

Published 4 ನವೆಂಬರ್ 2023, 12:58 IST
Last Updated 4 ನವೆಂಬರ್ 2023, 12:58 IST
ಅಕ್ಷರ ಗಾತ್ರ

ಬಾರಾಬಂಕಿ: ಕಂದಾಯ ಇಲಾಖೆ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಅಂಗಡಿಯೊಂದನ್ನು ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಜೈದ್‌ಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಶನಿವಾರ ತಿಳಿಸಿದ್ದಾರೆ. 

ಇಮಾಂಬಾಡ ಮಾರುಕಟ್ಟೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದ ಜಲೀಲ್ ಅಹ್ಮದ್ ಎಂಬುವರು, ಅಕ್ಟೋಬರ್ 14ರಂದು ತಮ್ಮ ಅಂಗಡಿಯನ್ನು ಜೈದ್‌ಪುರ ಪೊಲೀಸರು ಅಕ್ರಮವಾಗಿ ನೆಲಸಮ ಮಾಡಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 

ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್, ಕಂದಾಯ ಇಲಾಖೆ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ನೆಲಸಮಗೊಳಿಸಿರುವುದು ಕಾನೂನುಬಾಹಿರ. ಈ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಆ ಬಳಿಕ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT