ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಧಾರಾಕಾರ ಮಳೆ: ನಾಲ್ವರು ಸಾವು

Published 22 ಮೇ 2024, 23:30 IST
Last Updated 22 ಮೇ 2024, 23:30 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ವಿವಿಧೆಡೆ ಇದರಿಂದಾಗಿ ಸಂಭವಿಸಿರುವ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಸಂಸ್ಥೆಯು (ಕೆಎಸ್‌ಡಿಎಂಎ) ತಿಳಿಸಿದೆ. 

ಭಾರತ ಹವಾಮಾನ ಇಲಾಖೆಯು (ಐಎಂಡಿ) ಪತನಂತ್ತಿಟ್ಟ, ಅಳಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಹಾಗೂ ಇಡುಕ್ಕಿ  ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’ ಘೋಷಿಸಿದೆ. ಯಾರೂ ಮೀನುಗಾರಿಕೆಗೆ ತೆರಳಬಾರದು ಎಂದೂ ಕೆಎಸ್‌ಡಿಎಂಎ ಎಚ್ಚರಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT