ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

Published : 25 ಆಗಸ್ಟ್ 2024, 12:50 IST
Last Updated : 25 ಆಗಸ್ಟ್ 2024, 12:50 IST
ಫಾಲೋ ಮಾಡಿ
Comments

ಮುಂಬೈ: ಮಹಾರಾಷ್ಟ್ರದ ಧಾರಾಶಿವದಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಪ್ರಕರಣದ ಮುಖ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಬಾಲಕಿಯು ಶನಿವಾರ ಕಿರಾಣಿ ಅಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪರಿಚಯಸ್ಥನಾಗಿದ್ದ ಪ್ರಮುಖ ಆರೋಪಿ ವಿಜಯ್‌ ಘಡ್ಗೆ ಆಕೆಯನ್ನು ತನ್ನ ಮನೆಗೆ ಕರೆದಿದ್ದ. ಆಗ ಮನೆಯಲ್ಲಿ ಇತರ ನಾಲ್ವರೂ ಇದ್ದರು. ವಿಜಯ್‌ ಸೇರಿ ಮೂವರು  ಬಾಲಕಿ ಮೇಲೆ  ಅತ್ಯಾಚಾರ ಎಸಗಿದ್ದಾರೆ. ಬಾಲಕಿಯು ಮನೆಗೆ ಮರಳಿ ಪೋಷಕರಿಗೆ ವಿಷಯ ತಿಳಿಸಿದ್ದು, ದೂರು ದಾಖಲಿಸಲಾಗಿದೆ ಎಂದು ಹೇಳಿದರು.

ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.

ಉತ್ತರ ಪ್ರದೇಶ: ಅತ್ಯಾಚಾರ ಆರೋಪಿ ಬಂಧನ

16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್‌ ವೀರ್ ಅವರು ‘ಬಾಂಸಡಿಹ ಪೊಲೀಸ್‌ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ ಬಾಲಕಿ ಮೇಲೆ ಆಕೆಯ ಚಿಕ್ಕಪ್ಪ ಲಾಲ್‌ಜಿ (45) ಅತ್ಯಾಚಾರ ನಡೆಸಿದ್ದಾನೆ.  ಬಾಲಕಿಯು ಒಡಹುಟ್ಟಿದವರೊಂದಿಗೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಚಾವಣಿ ಮೂಲಕ ಬಂದು ಲೈಂಗಿಕ ದೌರ್ಜನ್ಯ ನಡೆಸಲಾಗಿದೆ’ ಎಂದು ಹೇಳಿದರು. ಬಾಲಕಿಯ ಚಿಕ್ಕಮ್ಮ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT