ತಿರುವನಂತಪುರ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಕಾರು ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು ವಿವಾಹವಾಗಿದ್ದ ನವದಂಪತಿ ಮಧುಚಂದ್ರಕ್ಕೆ (ಹನಿಮೂನ್) ಮಲೇಷ್ಯಾಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಮನೆಯಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.