ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

Published 25 ಫೆಬ್ರುವರಿ 2024, 8:59 IST
Last Updated 25 ಫೆಬ್ರುವರಿ 2024, 8:59 IST
ಅಕ್ಷರ ಗಾತ್ರ

ಕೌಶಾಂಬಿ: ಉತ್ತರ ಪ್ರದೇಶದ ಕೌಶಾಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ (ಇಂದು) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಾಂಬಿಯ ಭರ್ವಾರಿ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

'ಅವಘಡದಲ್ಲಿ 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ವಸತಿ ಪ್ರದೇಶದಿಂದ ದೂರದಲ್ಲಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ' ಎಂದು ಪೊಲೀಸ್‌ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT