ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ ಸ್ಫೋಟ: 4 ಮಂದಿ ಸಾವು

Published 3 ಏಪ್ರಿಲ್ 2024, 18:27 IST
Last Updated 3 ಏಪ್ರಿಲ್ 2024, 18:27 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಕಂಪನಿಯೊಂದರ ರಿಯಾಕ್ಟರ್‌ನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಿಂದ ನಾಲ್ವರು  ಮೃತಪಪಟ್ಟಿದ್ದು, 10 ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿದೆ.

‘ರಿಯಾಕ್ಟರ್‌ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಸುತ್ತಲಿದ್ದ ಜನರನ್ನು ದೂರಕ್ಕೆ ಚಿಮ್ಮುವಂತೆ ಮಾಡಿತು. ಇದುವರೆಗೆ 10–15 ಜನರಿಗೆ ತೀವ್ರ ಗಾಯಗಳಾಗಿರುವುದು ಗೊತ್ತಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪರಿಹಾರ ಕಾರ್ಯ ನಡೆಯುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT