ಅಮರಾವತಿ (ಆಂಧ್ರ ಪ್ರದೇಶ): ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಚಿನ್ನವಂಗ್ಲಿ ಗ್ರಾಮದಲ್ಲಿ ಮನೆಯ ಚಾವಣಿ ಕುಸಿದು, ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಗುರುವಾರ ರಾತ್ರಿ ಮನೆಯ ಮಣ್ಣಿನ ಚಾವಣಿ ಕುಸಿದು ಬಿದ್ದ ಪರಿಣಾಮ ಗುರು ಶೇಖರ್ ರೆಡ್ಡಿ (42), ಪತ್ನಿ ದಸ್ತಗಿರಮ್ಮ ಮತ್ತು ಇವರ ಇಬ್ಬರು ಹೆಣ್ಣುಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಅಲ್ಲಗಡ್ಡ ಪೊಲೀಸ್ ಅಧಿಕಾರಿ ಶೇಕ್ ಶಾರಿಫುದ್ದೀನ್ ತಿಳಿಸಿದರು.
ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅವಘಡ ಸಂಭವಿಸಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.