ನವದೆಹಲಿ: ಏಪ್ರಿಲ್ 28ಕ್ಕೆ ಆರು ಹಾಗೂ ಮೇ ತಿಂಗಳಲ್ಲಿ ನಾಲ್ಕು ರಫೇಲ್ ಯುದ್ಧವಿಮಾನಗಳು ಭಾರತಕ್ಕೆ ಬರಲಿವೆ ಎಂದು ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇದೇ 28 ಹಾಗೂ ಮೇ ತಿಂಗಳಲ್ಲಿ ಬರಲಿರುವ ರಫೇಲ್ ಯುದ್ಧವಿಮಾನಗಳು ಪಶ್ಚಿಮ ಬಂಗಾಳದಹಸೀಮಾರ್ ವಾಯುನೆಲೆಯಲ್ಲಿ ಇಳಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್ ಬದೌರಿಯಾ ಅವರು ಇದೇ ತಿಂಗಳಲ್ಲಿ ಫ್ರಾನ್ಸ್ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ಈ ವೇಳೆ ಅವರು 6 ರಫೇಲ್ ವಿಮಾನಗಳನ್ನು ಭಾರತಕ್ಕೆ ಕಳುಹಿಸಿಕೊಡುವರು ಎಂದು ಹೇಳಲಾಗಿದೆ.

36 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಫ್ರಾನ್ಸ್ ಜೊತೆಗೆ 2016ರಲ್ಲಿ ₹ 59,000 ಕೋಟಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

ಭಾರತಕ್ಕೆ ಬಂದ ಮೊದಲ ಐದು ರಫೇಲ್ ಯುದ್ಧ ವಿಮಾನಗಳನ್ನು 2020ರ ಸೆಪ್ಟೆಂಬರ್ 10 ರಂದು ವಾಯುಪಡೆಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಮೇ ಅಂತ್ಯದ ವೇಳೆಗೆ 17 ರಫೇಲ್ ಯುದ್ಧವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.