ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ತುರ್ಕ್ಮ್ಯಾನ್ ಗೇಟ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದುದರಿಂದ, ಕಟ್ಟಡದಲ್ಲಿದ್ದವರನ್ನು ಈ ಮೊದಲೇ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಘಟನೆ ವೇಳೆ ಯಾವುದೇ ಸಾವು–ನೋವಿನ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್ಡಿಆರ್ಎಫ್) ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.