ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ | ಹಳಿ ತಪ್ಪಿದ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು: 2 ರೈಲುಗಳ ಸಂಚಾರ ಸ್ಥಗಿತ

Published 1 ಜೂನ್ 2024, 5:06 IST
Last Updated 1 ಜೂನ್ 2024, 5:06 IST
ಅಕ್ಷರ ಗಾತ್ರ

ಭುವನೇಶ್ವರ: ಪೂರ್ವ ಕರಾವಳಿ ರೈಲ್ವೆಯ (ECOR) ಸಂಬಲ್‌ಪುರ ವಿಭಾಗದ ಕಾಂತಾಬಾಂಜಿ ನಿಲ್ದಾಣದ ಬಳಿ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು ಹಳಿ ತಪ್ಪಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 10.50ರ ಸುಮಾರಿಗೆ ಈ ಘಟನೆ ನಡೆದಿದ್ದು, ಎರಡೂ ಹಳಿಗಳಲ್ಲಿ ರೈಲು ಸಂಚಾರಕ್ಕೆ ಅಡ್ಡಿ ಉಂಟಾಯಿತು. ಶನಿವಾರ ಬೆಳಗ್ಗೆ 7 ಗಂಟೆಗೆ ಹಳಿಗಳನ್ನು ಸರಿಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳದಲ್ಲಿದ್ದು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಪೂರ್ವ ಕರಾವಳಿ ರೈಲ್ವೆ ವಲಯ (ECOR) ರಾಯ್‌ಪುರ-ತಿತ್ಲಗಢ್ ಎಕ್ಸ್‌ಪ್ರೆಸ್ ಮತ್ತು ಜುನಗಡ್‌ -ರಾಯಪುರ ಎಕ್ಸ್‌ಪ್ರೆಸ್ ಅನ್ನು ಶನಿವಾರ ರದ್ದುಗೊಳಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT