ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಮಿಳುನಾಡು | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ನಾಲ್ವರು ಸಾವು

Published 29 ಜೂನ್ 2024, 6:41 IST
Last Updated 29 ಜೂನ್ 2024, 6:41 IST
ಅಕ್ಷರ ಗಾತ್ರ

ವಿರುಧುನಗರ: ತಮಿಳುನಾಡಿನ ವಿರುಧುನಗರದ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪಟಾಕಿ ತಯಾರಿಕೆಗೆ ಬಳಸುವ ರಾಸಾಯನಿಕ ಪದಾರ್ಥಗಳು ಮತ್ತು ಕಚ್ಚಾ ಸಾಮಗ್ರಿಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸದಿರುವುದೇ ಸ್ಫೋಟಕ್ಕೆ ಕಾರಣ ಎಂದು ಶಂಕಿಸಲಾಗಿದೆ ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ಪಾದನಾ ಕಾರ್ಯಗಳಿಗಾಗಿ ಮೀಸಲಿಟ್ಟ ಕಟ್ಟಡದ ಕೊಠಡಿಗಳು ಹಾನಿಯಾಗಿವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT