ಹೋಶಿಯಾರ್ಪುರ (ಪಂಜಾಬ್): ಸತತ ಒಂಬತ್ತು ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕನನ್ನು ರಕ್ಷಿಸುವಲ್ಲಿ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ.

ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ಚಕ್ ಸಮಾನಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ತಮ್ಮ ಮನೆಯ ಬಳಿ ಆಟವಾಡುತ್ತಿದ್ದ ಬಾಲಕ ಗುರ್ಕರನ್ ಸಿಂಗ್ ಅಲ್ಲೇ ಸಮೀಪ ಹೊಸದಾಗಿ ಕೊರೆಯಲಾಗಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ.

ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಮಿಸಿದ ರಕ್ಷಣಾ ತಂಡಗಳು, 9 ಗಂಟೆಗಳ ಕಾರ್ಯಾಚರಣೆ ನಂತರ ತಡರಾತ್ರಿ 12.40 ರ ಸುಮಾರಿಗೆ ಬಾಲಕನನ್ನು ಹೊರಗೆ ತಂದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಎನ್ಡಿಆರ್ಎಫ್ ಡೆಪ್ಯುಟಿ ಕಮಾಂಡೆಂಟ್ ಪಂಕಜ್ ಶರ್ಮಾ ಮಾತನಾಡಿ, ಮಣ್ಣು ನಿರಂತರವಾಗಿ ಕುಸಿಯುತ್ತಿದ್ದರಿಂದ ರಕ್ಷಣಾ ಕಾರ್ಯಾಚರಣೆಯು ಸವಾಲಿನಿಂದ ಕೂಡಿತ್ತು. ಆದರೂ ನಮ್ಮ ತಂಡ ಮಗುವನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ಹೇಳಿದ್ದಾರೆ.

‘ಇದು ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪಂಜಾಬ್ ಪೊಲೀಸ್, ಜಿಲ್ಲಾ ಆಡಳಿತದ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಸ್ವಯಂಸೇವಕರ ತಂಡಗಳ ಜಂಟಿ ಪ್ರಯತ್ನವಾಗಿದೆ’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

‘ಕಾರ್ಯಾಚರಣೆಯ ಆರಂಭದಲ್ಲಿ, ಬಾಲಕನ ತಾಯಿಯನ್ನು ಸ್ಥಳಕ್ಕೆ ಕರೆಸಿ ಆತನೊಂದಿಗೆ ಮಾತನಾಡುವಂತೆ ಹೇಳಲಾಗಿತ್ತು. ಆ ಮೂಲಕ ಬಾಲಕನಿಗೆ ಧೈರ್ಯ ತುಂಬುವ ಕೆಲಸ ಮಾಡಲಾಯಿತು. ಪೈಪ್ ಮೂಲಕ ಆಮ್ಲಜನಕವನ್ನು ಪೂರೈಸಲಾಗಿದೆ’ ಎಂದು ಹೇಳಿದ್ದಾರೆ.

ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆದ ರಕ್ಷಣಾ ತಂಡದವರಿಗೆ ಕುಟುಂಬಸ್ಥರು, ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.