ಅಮರಾವತಿ: ಆಂಧ್ರ ಪ್ರದೇಶದಲ್ಲಿ ನೆಲಸಿರುವ ಎಲ್ಲ ಹೆಣ್ಣುಮಕ್ಕಳು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ‘ಸ್ತ್ರೀ ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಾಂತಿಲಾಲ್ ದಂಡೆ ತಿಳಿಸಿದ್ದಾರೆ.

ಯೋಜನೆಯು ಆಗಸ್ಟ್ 15ರಿಂದ ಆರಂಭವಾಗಲಿದ್ದು, ಫಲಾನುಭವಿಗಳು ಮಾನ್ಯತೆ ಇರುವ ಗುರುತಿನ ಚೀಟಿ ತೋರಿಸುವ ಮೂಲಕ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ದಂಡೆ ಸೋಮವಾರ ತಿಳಿಸಿದರು.

ಆಂಧ್ರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಲಭ್ಯವಿರುವ ಬಸ್ಗಳನ್ನೇ ಬಳಸಿಕೊಂಡು ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು. ಬೇಡಿಕೆ ಆಧರಿಸಿ ಹೆಚ್ಚುವರಿ ಬಸ್ಗಳನ್ನು ಖರೀದಿಸಲಾಗುವುದು ಎಂದು ಅವರು ತಿಳಿಸಿದರು.

ಎನ್ಡಿಎ ನೇತೃತ್ವದ ಸರ್ಕಾರವು 2024ರ ಚುನಾವಣೆಯ ವೇಳೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಭರವಸೆಯನ್ನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.