ಪುಣೆ: ಕೊರೊನಾ ಸಾಂಕ್ರಾಮಿಕ ಕಾರಣದಿಂದಾಗಿ ಉಂಟಾಗುತ್ತಿರುವ ಶೈಕ್ಷಣಿಕ ನಷ್ಟವನ್ನು ತಪ್ಪಿಸುವುದಕ್ಕಾಗಿ ಮಹಾರಾಷ್ಟ್ರ ಶಿಕ್ಷಣ ಇಲಾಖೆ 11ನೇ ತರಗತಿಯ ವಿದ್ಯಾರ್ಥಿಗಳಿಗೆಸೋಮವಾರದಿಂದ ಉಚಿತ ಆನ್‌ಲೈನ್ ತರಗತಿಗಳನ್ನು ಆರಂಭಿಸಿದೆ.

ಯೂಟ್ಯೂಬ್ ಮೂಲಕ ಈ ತರಗತಿಗಳು ಪ್ರಾರಂಭವಾಗಿದ್ದು, ಈವರೆಗೆ ಜ್ಯೂನಿಯರ್ ಕಾಲೇಜಿನ ಮೊದಲ ವರ್ಷದ (ಎಫ್‌ವೈಜೆಸಿ ಅಥವಾ 11ನೇ ತರಗತಿ) ಸುಮಾರು 60 ಸಾವಿರ ವಿದ್ಯಾರ್ಥಿಗಳು ತರಗತಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ರಾಜ್ಯ ಶಿಕ್ಷಣ ಸಂಶೋಧನಾ ಮಂಡಳಿಯ ನಿರ್ದೇಶಕ ದಿನಾರ್ ಪಾಟೀಲ್ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದ ರೋಗದ ಕಾರಣ ಕಾಲೇಜುಗಳು ಇನ್ನೂ ಆರಂಭವಾಗದಿರುವುದರಿಂದ, ಮೊದಲ ವರ್ಷ ಜ್ಯೂನಿಯರ್ ಕಾಲೇಜಿನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಜತೆಗೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಿಗರಿಗೆ ಮೀಸಲಾತಿ ನೀಡುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಕಾರಣ ಎಫ್‌ವೈಜೆಸಿಗೆ ಪ್ರವೇಶ ಪ್ರಕ್ರಿಯೆಗಳು ಸ್ಥಗಿತಗೊಡಿದೆ.

ಭಾನುವಾರ ಸಂಜೆವರೆಗೆ ಸುಮಾರು 62 ಸಾವಿರದಷ್ಟು ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಪಾಟೀಲರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.