ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ದೇಶ ತೊರೆದ ಫ್ರೆಂಚ್‌ ಪತ್ರಕರ್ತೆ

Published 17 ಫೆಬ್ರುವರಿ 2024, 0:27 IST
Last Updated 17 ಫೆಬ್ರುವರಿ 2024, 0:27 IST
ಅಕ್ಷರ ಗಾತ್ರ

ನವದೆಹಲಿ: ಎರಡು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿರುವ ಫ್ರಾನ್ಸ್‌ನ ವನೆಸ್ಸಾ ಡೊನಾಕ್‌ ಅವರು ಶುಕ್ರವಾರ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಸರ್ಕಾರದ ಧೋರಣೆಯಿಂದ ಬೇಸತ್ತು ತವರಿಗೆ ಮರಳುತ್ತಿರುವುದಾಗಿ ಹೇಳಿದ್ದಾರೆ.

‘ಭಾರತವನ್ನು ತೊರೆಯುವುದು ನನ್ನ ಆಯ್ಕೆಯಾಗಿರಲಿಲ್ಲ. ನಾನು ಬರೆದಿರುವ ಲೇಖನಗಳು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟುಮಾಡುವಂತಿವೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಇದರಿಂದ ಬೇಸತ್ತು ದೇಶವನ್ನು ತೊರೆಯುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

‘ನಾನು 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿ ಬಂದು 23 ವರ್ಷಗಳ ಕಾಲ ಪತ್ರಕರ್ತೆಯಾಗಿ ಕೆಲಸ ಮಾಡಿದ ದೇಶವನ್ನು ತೊರೆಯುತ್ತಿದ್ದೇನೆ. ನನ್ನ ವಿರುದ್ಧ ಆರೋಪಗಳು ಬಂದಿರುವ ಕಾರಣ ಇಲ್ಲಿ ಜೀವನ ಮುಂದುವರಿಸಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯು (ಎಫ್‌ಆರ್‌ಆರ್‌ಒ) ನಿಯಮ ಉಲ್ಲಂಘನೆ ಆರೋಪದಲ್ಲಿ ವನೆಸ್ಸಾ ಅವರಿಗೆ ಕಳೆದ ತಿಂಗಳು ನೋಟಿಸ್‌ ಜಾರಿಗೊಳಿಸಿತ್ತು. ನಿಮ್ಮ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್‌ ಅನ್ನು ಏಕೆ ರದ್ದುಪಡಿಸಬಾರದು ಎಂದು ಕೇಳಿತ್ತು. 

ವನೆಸ್ಸಾ ಅವರು ಫ್ರಾನ್ಸ್, ಸ್ವಿಟ್ಜರ್‌ಲೆಂಡ್‌ ಮತ್ತು ಬೆಲ್ಜಿಯಂನ ಪತ್ರಿಕೆಗಳಿಗೆ ದಕ್ಷಿಣ ಏಷ್ಯಾದ ವರದಿಗಾರ್ತಿಯಾಗಿ ಅವರು ಕೆಲಸ ಮಾಡುತ್ತಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT