ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ | ಮರುಕಳಿಸಿದ ಹಿಂಸಾಚಾರ: ಎರಡು ಮನೆಗಳಿಗೆ ಬೆಂಕಿ, ಗುಂಡಿನ ಸದ್ದು

Published 5 ಅಕ್ಟೋಬರ್ 2023, 6:53 IST
Last Updated 5 ಅಕ್ಟೋಬರ್ 2023, 6:53 IST
ಅಕ್ಷರ ಗಾತ್ರ

ಇಂಫಾಲ: ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಗುರುವಾರ ಮತ್ತೆ ಹಿಂಸಾಚಾರ ಮರುಕಳಿಸಿದ್ದು ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಜತೆಗೆ ಹಲವು ಸುತ್ತು ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೀತೆಲ್ಮನಬಿ ಎನ್ನುವ ಪ್ರದೇಶದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ದಾಳಿ ನಡೆದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.  ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 3 ರಂದು ಮೈತೇಯಿ ಮತ್ತು ಕುಕಿ ಜನಾಂಗಗಳ ಮಧ್ಯೆ ಆರಂಭವಾದ ಸಂಘರ್ಷದಲ್ಲಿ ಈವರೆಗೆ 180ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT