ಪಟ್ನಾ: ಚಿಕ್ಕಪ್ಪನ ವಿರುದ್ಧ ಬಂಡಾಯ ಎದ್ದಿರುವ ಲೋಕಜನಶಕ್ತಿ (ಎಲ್‌ಜೆಪಿ) ಪಕ್ಷದ ನಾಯಕ ಚಿರಾಗ್ ಪಾಸ್ವಾನ್‌ಎಲ್‌ಜೆಪಿಯ ಬಿಹಾರ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ.

ಚಿರಾಗ್ ಅವರ ಆಪ್ತ ರಾಜು ತಿವಾರಿಯನ್ನು ಬಿಹಾರ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಾಸ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಬುಧವಾರ ಸಂಜೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ ಚಿರಾಗ್, ನೀವು ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಥವಾ ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಕೇಳಿದ್ದರೆ ನಾನೇ ಬಿಟ್ಟುಕೊಡುತ್ತಿದೆ. ತಂದೆಯ ನಿಧನದ ಬಳಿಕ ನೀವೇ ನನ್ನ ಸರ್ವಸ್ವ ಎಂದು ತಿಳಿದಿದ್ದೆ ಎಂದು ಚಿರಾಗ್ ಹೇಳಿದ್ದಾರೆ.

ನಾನು ರಾಮ್‌ವಿಲಾಸ್ ಪಾಸ್ವಾನ್ ಮಗ, ಸಿಂಹದ ಮರಿ ಇದ್ದಂತೆ ಎನ್ನುವ ಮೂಲಕ ಪಶುಪತಿ ಪಾರಾಸ್‌ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಪಶುಪತಿ ಪಾರಾಸ್ ಬಣ, ಚಿರಾಗ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇತ್ತ ಚಿರಾಗ್ ಕೂಡ ಬಿಹಾರ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಹೊಸ ತಂತ್ರ ಹೂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.