ತಿರುವನಂತಪುರ (ಕೇರಳ): ಡಿಸೆಂಬರ್ 20ರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ತೀರ್ಥಯಾತ್ರೆಗೆ ತೆರಳುವ ಭಕ್ತರ ಸಂಖ್ಯೆಯನ್ನು 5000ದ ವರೆಗೆ ಹೆಚ್ಚಿಸಿ ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ.

ಶಮರಿಮಲೆಯಲ್ಲಿ ವಿಧಿಸಲಾಗಿರುವ ನಿರ್ಬಂಧಗಳ ಕುರಿತಾಗಿ ಅರ್ಜಿಗಳನ್ನು ಪರಿಗಣಿಸಿರುವ ಹೈಕೋರ್ಟ್, ನಿಲಕ್ಕಲ್ ತಲುಪುವ ಮುನ್ನ 48 ಗಂಟೆಗಳ ಒಳಗಡೆ ಆರ್‌ಟಿಪಿಸಿಆರ್ ಪರೀಕ್ಷೆಯ ಆಧಾರದಲ್ಲಿ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ಡಿಸೆಂಬರ್ 30ರಿಂದ ಕಡ್ಡಾಯಗೊಳಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿತ್ತು.

ಶಮರಿಮಲೆಯಲ್ಲಿ ದೈನಂದಿನ ತೀರ್ಥಯಾತ್ರಿಕರ ಸಂಖ್ಯೆಯನ್ನು ಆರಂಭದಲ್ಲಿ ವಾರದ ದಿನಗಳಲ್ಲಿ 1000 ಹಾಗೂ ವಾರಾಂತ್ಯದಲ್ಲಿ 2000 ಎಂದು ನಿಗದಿಪಡಿಸಲಾಗಿತ್ತು. ಬಳಿಕ ದೇವಸ್ಥಾನದಿಂದ ಬರುವ ಆದಾಯದಲ್ಲಿ ತೀವ್ರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ದೇವಾಲಯವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ ಮನವಿಯನ್ನು ಪರಿಗಣಿಸಿ ಭಕ್ತರ ಸಂಖ್ಯೆಯನ್ನು ಕ್ರಮವಾಗಿ 2000 ಹಾಗೂ 3000ಕ್ಕೆ ಹೆಚ್ಚಿಸಲಾಯಿತು.

ಇದನ್ನೂ ಓದಿ:ತಿರುಪತಿ: ಟೋಕನ್ ವಿತರಣೆ ಅವಧಿ ಬದಲು

ಡಿಸೆಂಬರ್ 26ರಂದು ಮಂಡಲ ಪೂಜೆಯ ಬಳಿಕ ಭಕ್ತರು ಹಾಗೂ ಸಿಬ್ಬಂದಿಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲು ರಾಜ್ಯ ಸರಕಾರ ನಿರ್ಧರಿಸಿತ್ತು.

ನವೆಂಬರ್ 16ರಿಂದ ತೀರ್ಥಯಾತ್ರೆ ಆರಂಭವಾದ ಬಳಿಕ ಇದುವರೆಗೆ 300ಕ್ಕೂ ಹೆಚ್ಚು ಮಂದಿಗೆ (ಸಿಬ್ಬಂದಿ, ಪೊಲೀಸ್ ಸೇರಿದಂತೆ) ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟುಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.