ಅಮರಾವತಿ: ಆಂಧ್ರಪ್ರದೇಶದಲ್ಲಿ ಇಂಧನ ಕೊರತೆಯಿಂದ 421 ಪೆಟ್ರೋಲ್ ಬಂಕ್ಗಳನ್ನು ಮುಚ್ಚಲಾಗಿದೆ. ಈ ಸಂಬಂಧ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ.

‘ಶನಿವಾರ (ಏ.25) ಮುಂಬೈನಿಂದ ಅಮರಾವತಿಗೆ ಪ್ರಯಾಣ ಬೆಳೆಸುವ ಮೊದಲು ನಾಯ್ಡು ಅವರು, ಮುಖ್ಯ ಕಾರ್ಯದರ್ಶಿ ಸಾಯಿ ಪ್ರಸಾದ್ ಮತ್ತು ಹಿರಿಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಪರಿಸ್ಥಿತಿಯನ್ನು ಪರಿಶೀಲಿಸಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಇಂಧನ ಕೊರತೆಯನ್ನು ನೀಗಿಸಲು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟವನ್ನು ದೂರ ಮಾಡಲು ಈ ಕ್ರಮಗಳನ್ನು ತಕ್ಷಣವೇ ಜಾರಿಗೆ ತರುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು’ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ರಾಜ್ಯದ 4,510 ಪೆಟ್ರೋಲ್ ಬಂಕ್ಗಳಲ್ಲಿ ಸುಮಾರು 421 ಅನ್ನು ಪೂರೈಕೆ ಕೊರತೆಯಿಂದಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ನಾಯ್ಡು ಅವರಿಗೆ ತಿಳಿಸಿದ್ದಾರೆ. ಪೂರೈಕೆ ಪ್ರಮಾಣವು ಶೇ 10ರಷ್ಟು ಅಧಿಕವಾಗಿದೆ. ಆದಾಗ್ಯೂ, ಜನರು ಆತಂಕಗೊಂಡು ಹೆಚ್ಚುವರಿ ಖರೀದಿ ಮಾಡುತ್ತಿದ್ದಾರೆ. ಇದರಿಂದಾಗಿ ಬೇಡಿಕೆ ತೀವ್ರವಾಗಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಹಲವು ಬಂಕ್ಗಳ ಬಳಿ ಭಾರಿ ಜನದಟ್ಟಣೆ ಉಂಟಾಗಿದೆ’ ಎಂದು ಅಧಿಕಾರಿಗಳು ಹೇಳಿದರು.

ಈ ವಿಚಾರವಾಗಿ ಜಿಲ್ಲಾಧಿಕಾರಿಗಳು ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ, ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವಂತೆ ನಾಯ್ಡು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.