ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಕನಸು ನನಸು: ಪ್ರಧಾನಿ ಮೋದಿ

Published 3 ಮಾರ್ಚ್ 2024, 10:32 IST
Last Updated 3 ಮಾರ್ಚ್ 2024, 10:32 IST
ಅಕ್ಷರ ಗಾತ್ರ

ಗಾಂಧಿನಗರ: ಗುಜರಾತ್ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪಡೆದ ಅಭ್ಯರ್ಥಿಗಳನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದರೊಂದಿಗೆ ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಕೆಲಸ ಮಾಡುವಂತೆ ಕರೆ ನೀಡಿದ್ದಾರೆ.

ಗಾಂಧಿನಗರದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇರ ನೇಮಕಾತಿ ಮೂಲಕ ಆಯ್ಕೆಯಾಗಿರುವ 1,990 ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಬಳಿಕ ಅಭ್ಯರ್ಥಿಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ, ಮುಂದಿನ 25 ವರ್ಷ ನಮ್ಮ ದೇಶದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಜನರ ಜೀವನದ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.

ನಿಮ್ಮ ಸಂಕಲ್ಪ, ದೇಶದ ಹಿತಾಸಕ್ತಿಗಾಗಿ ತೆಗೆದುಕೊಂಡ ನಿರ್ಧಾರಗಳು ರಾಷ್ಟ್ರದ ಅಭಿವೃದ್ಧಿಯನ್ನು ಗಟ್ಟಿಗೊಳಿಸಲಿದೆ. ಈ ಜವಾಬ್ದಾರಿಯಿಂದ ಹೊಸ ಅವಕಾಶ ಹಾಗೂ ಸವಾಲುಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.

ನೀವು ಯಾವ ಇಲಾಖೆಯಲ್ಲಿ ನೇಮಕಗೊಂಡರೂ, ಯಾವ ನಗರ ಅಥವಾ ಹಳ್ಳಿಯಲ್ಲಿದ್ದರೂ ನಿಮ್ಮ ಕೆಲಸವು ಜನ ಸಾಮಾನ್ಯರಿಗೆ ತಲುಪಬೇಕು. ಅವರ ಸಮಸ್ಯೆಗಳನ್ನು ಬಗಹರಿಸಿ ಜೀವನ ಸರಳಗೊಳಿಸಬೇಕು. ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ದೇಶದ ಕನಸನ್ನು ನನಸಾಗಿಸಬೇಕು ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT