ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಿಂದ ದುಬೈಗೆ ಹೊರಟಿದ್ದ ಫೆಡೆಕ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ: ಭೂಸ್ಪರ್ಶ

Last Updated 1 ಏಪ್ರಿಲ್ 2023, 11:02 IST
ಅಕ್ಷರ ಗಾತ್ರ

ನನವದೆಹಲಿ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನಕ್ಕೆ ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ಪಕ್ಷಿಯೊಂದು ಡಿಕ್ಕಿ ಹೊಡೆದಿದೆ. ಇದರಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಬೆಳಗ್ಗೆ 10.46ಕ್ಕೆ ಎಫ್‌ಎಕ್ಸ್ 5279 ಫ್ಲೈಟ್ ಟೇಕ್ ಆಫ್ ಕೆಲವೇ ಕ್ಷಣಗಳಲ್ಲಿ 1000 ಅಡಿ ಎತ್ತರದಲ್ಲಿ ಹಕ್ಕಿಯೊಂದು ಡಿಕ್ಕಿ ಹೊಡೆದ ನಂತರ ಸಂಪೂರ್ಣ ತುರ್ತು ಲ್ಯಾಂಡಿಂಗ್ ಘೋಷಿಸಲಾಗಿದೆ.

ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತಪಾಸಣೆ ಬಳಿಕ ಮಧ್ಯಾಹ್ನ ಮತ್ತೆ ಟೇಕಾಫ್ ಆಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ.

ಕಳೆದ ಮೂರು –ನಾಲ್ಕು ದಿನಗಳಿಂದ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳನ್ನು ಬೇರೆ ಕಡೆಗೆ ತಿರುಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT