ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

G20 Summit: 2 ದಿನ ಮೊದಲೇ ಭಾರತಕ್ಕೆ ಜೋ ಬೈಡನ್ ಆಗಮನ– ಗರಿಗೆದರಿದ ಕುತೂಹಲ

ಬೈಡನ್‌ ಸೆ. 7ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಸೆ.8ರಂದು ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.
Published 5 ಸೆಪ್ಟೆಂಬರ್ 2023, 7:23 IST
Last Updated 5 ಸೆಪ್ಟೆಂಬರ್ 2023, 7:23 IST
ಅಕ್ಷರ ಗಾತ್ರ

ನವದೆಹಲಿ: ನವದೆಹಲಿಯ ಪ್ರಗತಿ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾದ ಅಂತರರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರದಲ್ಲಿ ಇದೇ ಸೆ.9 ಹಾಗೂ 10 ರಂದು ಮಹತ್ವದ ಜಿ–20 ನಾಯಕರ ಸಭೆ ನಡೆಯಲಿದೆ.

ಈಗಾಗಲೇ ಈ ಕಾರ್ಯಕ್ರಮಕ್ಕೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸೇರಿದಂತೆ ಅನೇಕ ಜಾಗತಿಕ ನಾಯಕರು ಶೃಂಗದಲ್ಲಿ ಭಾಗಿಯಾಗಲಿದ್ದಾರೆ.

ವಿಶೇಷವೆಂದರೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಜಿ–20 ಕಾರ್ಯಕ್ರಮಕ್ಕೆ ಎರಡು ದಿನ ಮೊದಲೇ ಭಾರತಕ್ಕೆ ಆಗಮಿಸುತ್ತಿದ್ದಾರೆ. ಈ ಸಂಗತಿ ಉಭಯ ದೇಶಗಳ ದ್ವಿಪಕ್ಷೀಯ ವ್ಯವಹಾರಗಳಲ್ಲಿ ಕುತೂಹಲ ಮೂಡಿಸಿದೆ.

ಬೈಡನ್‌ ಸೆ. 7ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಸೆ.8ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.

ಭಾರತ ಪ್ರವಾಸವನ್ನು ಎದುರು ನೋಡುತ್ತಿರುವುದಾಗಿ ಹೇಳಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್,  ಷಿ–ಜಿನ್‌ಪಿಂಗ್‌ ಗೈರಾಗುತ್ತಿರುವುದಕ್ಕೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಚೀನಾ ಹಾಗೂ ಭಾರತ ನಡುವೆ ಉದ್ಭವಿಸಿರುವ ಉದ್ವಿಗ್ನತೆ ಸಂದರ್ಭದಲ್ಲೇ ದೆಹಲಿಯಲ್ಲಿ ಆಯೋಜನೆಗೊಂಡಿರುವ ಜಿ20 ಶೃಂಗಸಭೆಯಲ್ಲಿ ಷಿ ಪಾಲ್ಗೊಳ್ಳುತ್ತಿಲ್ಲ. ಅವರ ಬದಲು ಪ್ರಧಾನಿ ಲಿ ಕಿಯಾಂಗ್‌ ಅವರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ. 

ಷಿ–ಜಿನ್ ಪಿಂಗ್‌ ಅವರು ಗೈರು ಆಗುತ್ತಿರುವುದಕ್ಕೆ ಅವರು ಕಾರಣ ಬಹಿರಂಗಪಡಿಸಿಲ್ಲ. ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್‌) ಮತ್ತು ಪೂರ್ವ ಏಷ್ಯಾ ಶೃಂಗಕ್ಕೂ ಜಿನ್‌ಪಿಂಗ್‌ ಗೈರಾಗಿದ್ದರು.

ಜಿ20 ಸಮಾವೇಶದಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರಜಿಲ್, ಕೆನಡಾ, ಚೀನಾ, ಫ್ರಾನ್ಸ್‌, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ಕೊರಿಯಾ, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಬ್ರಿಟನ್, ಅಮೆರಿಕ ಹಾಗೂ ಐರೋಪ್ಯ ಒಕ್ಕೂಟಗಳು ಪಾಲ್ಗೊಳ್ಳುತ್ತಿವೆ.

ಜೋ ಬೈಡನ್ ಅವರ ಅಭಿಮಾನಿಯೊಬ್ಬರು ಪಂಜಾಬ್‌ನಲ್ಲಿ ಬೈಡನ್ ಅವರ 7.5 ಅಡಿ ಎತ್ತರದ ಆಕರ್ಷಕ ಚಿತ್ರವನ್ನು ಬಿಡಿಸಿದ್ದಾರೆ.

––

ಏಜನ್ಸಿಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT