ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

G20 Summit: 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳಲ್ಲಿ ಪ್ರಧಾನಿ ಮೋದಿ ಭಾಗಿ

Published 8 ಸೆಪ್ಟೆಂಬರ್ 2023, 9:42 IST
Last Updated 8 ಸೆಪ್ಟೆಂಬರ್ 2023, 9:42 IST
ಅಕ್ಷರ ಗಾತ್ರ

ನವದೆಹಲಿ: ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದ ಪ್ರಮುಖ ನಾಯಕರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಮೂರು ದಿನಗಳ ಈ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಿ20 ಶೃಂಗಸಭೆ ಸೆಪ್ಟೆಂಬರ್ 9 ಹಾಗೂ 10ರಂದು ನವದೆಹಲಿಯಲ್ಲಿ ನಡೆಯುತ್ತಿದೆ.

ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಇಂದು (ಶುಕ್ರವಾರ), ಅಮೆರಿಕ ಅಧ್ಯಕ್ಷ, ಬಾಂಗ್ಲಾದೇಶ ಪ್ರಧಾನಿ ಮತ್ತು ಮಾರಿಷಸ್ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ಶನಿವಾರದಂದು ಜಿ20 ಕಾರ್ಯಕ್ರಮದೊಂದಿಗೆ ಬ್ರಿಟನ್, ಜಪಾನ್, ಜರ್ಮನಿ ಮತ್ತು ಇಟಲಿ ನಾಯಕರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ಮೋದಿ ಅವರು ಭಾನುವಾರ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರಾನ್ ಅವರೊಂದಿಗೆ ಭೋಜನಕೂಟದ ವೇಳೆ ಮಾತುಕತೆ ನಡೆಸಲಿದ್ದಾರೆ.

ಇದರ ಹೊರತಾಗಿ ಕೆನೆಡಾ, ಕೊಮೊರೊಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಐರೋಪ್ಯ ಒಕ್ಕೂಟ, ಬ್ರೆಜಿಲ್ ಮತ್ತು ನೈಜೀರಿಯಾ ರಾಷ್ಟ್ರಗಳ ನಾಯಕರೊಂದಿಗೂ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT