ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ20 ಶೃಂಗಸಭೆಯ ಬಳಿಕ ವಿಯೆಟ್ನಾಂ ಪ್ರವಾಸ ಕೈಗೊಂಡ ಅಮೆರಿಕ ಅಧ್ಯಕ್ಷ ಬೈಡನ್

Published 10 ಸೆಪ್ಟೆಂಬರ್ 2023, 6:56 IST
Last Updated 10 ಸೆಪ್ಟೆಂಬರ್ 2023, 6:56 IST
ಅಕ್ಷರ ಗಾತ್ರ

ನವದೆಹಲಿ: ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡನ್, ಇಂದು ವಿಯೆಟ್ನಾಂ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬೈಡನ್ ಹಾಗೂ ಇತರೆ ಜಿ20 ನಾಯಕರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಶುಕ್ರವಾರದಂದು ಬೈಡನ್ ರಾಷ್ಟ್ರ ರಾಜಧಾನಿಗೆ ಬಂದಿಳಿದರು. ಅಮೆರಿಕ ಅಧ್ಯಕ್ಷರಾದ ಬಳಿಕ ಜೋ ಬೈಡನ್ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿತ್ತು.

ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಶನಿವಾರ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ್ದ ಬೈಡನ್, ರಾತ್ರಿ ರಾಷ್ಟ್ರಪತಿ ದ್ರೌಪರ್ದಿ ಮುರ್ಮು ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT