ಗದಗ: ‘ರಾಷ್ಟ್ರಸೇವೆಯ ಧ್ಯೇಯದೊಂದಿಗೆ ಸ್ಥಾಪನೆಯಾದ ಭಾರತೀಯ ಜನತಾ ಪಕ್ಷವು ಇಂದು ದೇಶದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಶಕ್ತಿಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ವಿಷಯ. ಪಕ್ಷದ ಲಕ್ಷಾಂತರ ಕಾರ್ಯಕರ್ತರ ತ್ಯಾಗ, ಸಮರ್ಪಣೆ ಮತ್ತು ಶ್ರಮವೇ ಬಿಜೆಪಿಯ ಬಲವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.

ನಗರದ ಬಿಜೆಪಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.

‘ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ.ಅಡ್ವಾಣಿ ಅವರ ದೃಢ ನಾಯಕತ್ವ ಮತ್ತು ದೂರದೃಷ್ಟಿಯ ಫಲವಾಗಿ ಬೆಳೆದ ಈ ಸಂಘಟನೆ ಇಂದು ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಎಂಬ ಸಂಕಲ್ಪದೊಂದಿಗೆ ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ’ ಎಂದು ಹೇಳಿದರು.

ಸಂಸ್ಥಾಪನಾ ದಿನದ ಧ್ವಜಾರೋಹಣ ನೆರವೇರಿಸಿದ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಮಾತನಾಡಿ, ‘1980ರಲ್ಲಿ ಇಬ್ಬರು ಸದಸ್ಯರಿಂದ ಪ್ರಾರಂಭವಾದ ಬಿಜೆಪಿ ಪಯಣ, ಇಂದು ವಿಶ್ವದ ಬೃಹತ್ ರಾಜಕೀಯ ಶಕ್ತಿಯಾಗಿ ಪರಿವರ್ತನೆಗೊಂಡಿದೆ’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರದಲ್ಲಿ ಸತತ ಮೂರುಬಾರಿ ಸರ್ಕಾರ ರಚನೆ, ಇಂದಿಗೆ 21 ರಾಜ್ಯಗಳಲ್ಲಿ ಎನ್ಡಿಎ ಆಡಳಿತದ ಮೂಲಕ ಬಿಜೆಪಿ ಇಂದು ಭಾರತೀಯರ ಭರವಸೆಯಾಗಿದೆ. ಇದು ಕೇವಲ ರಾಜಕೀಯ ಪಯಣವಲ್ಲ, ಭಾರತದ ವಿಕಾಸದ ಪಯಣ’ ಎಂದು ಹೇಳಿದರು.

ಹಿರಿಯ ಮುಖಂಡ ಎಂ.ಎಸ್.ಕರೀಗೌಡ್ರ ಮಾತನಾಡಿ, ‘ಸಾಮಾನ್ಯ ಜನರ ಆಶಯಗಳನ್ನು ನೆರವೇರಿಸುವ ದಿಸೆಯಲ್ಲಿ ಬಿಜೆಪಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ನಾವೆಲ್ಲರೂ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಇನ್ನಷ್ಟು ಸಮರ್ಪಿತವಾಗಿ ತೊಡಗಿಸಿಕೊಳ್ಳಬೇಕಿದೆ’ ಎಂದರು.

ಮುಖಂಡರಾದ ಶ್ರೀಪತಿ ಉಡುಪಿ, ಜಗನ್ನಾಥಸಾ ಭಾಂಡಗೆ, ಬಿ.ಎಚ್.ಲದ್ವಾ, ಎಂ.ಎಂ.ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಿರ್ಮಲಾ ಕೊಳ್ಳಿ, ಪ್ರಮುಖರಾದ ಸಿದ್ದು ಪಲ್ಲೇದ, ರವಿ ದಂಡಿನ, ಗದಗ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಶಂಕರ ಕಾಕಿ, ವಿಜಯಲಕ್ಷ್ಮೀ ಮಾನ್ವಿ, ಪದ್ಮೀನಿ ಮುತ್ತಲದಿನ್ನಿ, ಪುಷ್ಪಾ ಪೂಜಾರ, ರೇಖಾ ಗವಳಿ, ಕಮಲಾಕ್ಷೀ ತಕ್ಕಲಕೋಟಿ, ಸುಮಂಗಲಾ ಕೊನೆವಾಲ, ಶಿವಲೀಲಾ ಉಮಚಗಿ ಸೇರಿದಂತೆ ಹಲವರು ಇದ್ದರು.

ಗದಗ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವಾತಿ ಅಕ್ಕಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-23-1138752761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.