ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಸರ್ಗಿಕ ಅನಿಲ ದರದಲ್ಲಿ ‌₹7.55 ಇಳಿಕೆ

Last Updated 4 ಅಕ್ಟೋಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಗ್ಯಾಸ್‌ ಅಥಾರಿಟಿ ಆಫ್‌ ಇಂಡಿಯಾ (ಗೇಲ್‌) ನಗರದಲ್ಲಿ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‌ಜಿ) ದರವನ್ನು ಪ್ರತಿ ಕೆ.ಜಿ.ಗೆ ₹7.55 ಇಳಿಕೆ ಮಾಡಿದ್ದು, ನೂತನ ದರ ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.

ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಗೇಲ್‌ ದರ ಪರಿಷ್ಕರಣೆ ಮಾಡಿದೆ. ಇದರಿಂದಾಗಿ ಪ್ರತಿ ಕೆ.ಜಿಗೆ ₹ 58.55 ಇದ್ದಸಿಎನ್‌ಜಿ ದರ ₹ 51ಕ್ಕೆ ಇಳಿಕೆಯಾಗಿದೆ. ನಗರದಲ್ಲಿ ಗೇಲ್‌ 15ಸಿಎನ್‌ಜಿ ಕಾರ್ಯಾಚರಣೆ ಕೇಂದ್ರಗಳನ್ನು ಹೊಂದಿದೆ.

‘ಪ್ರಸಕ್ತ ಆರ್ಥಿಕ ವರ್ಷದಲ್ಲಿ 100ಸಿಎನ್‌ಜಿ ಕಾರ್ಯಾಚರಣೆ ಕೇಂದ್ರಗಳನ್ನು ನಿರ್ಮಿಸುವ ಗುರಿ ಹಾಕಿಕೊಳ್ಳಲಾಗಿದೆ.ವಾಹನಗಳಿಂದಾಗುವ ಮಾಲಿನ್ಯ ನಿಯಂತ್ರಣಕ್ಕೆ ಸಿಎನ್‌ಜಿ ಸಹಾಯಕವಾಗಿದೆ’ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT