ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ

Last Updated 26 ಫೆಬ್ರುವರಿ 2019, 19:27 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಸಂಸ್ಥೆಗಳು ಮತ್ತು ಗಣ್ಯರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಗಾಂಧಿ ಶಾಂತಿ ಪ್ರಶಸ್ತಿಯನ್ನು ಮಂಗಳವಾರ ಪ್ರದಾನ ಮಾಡಿದರು.

ನಾಲ್ಕು ವರ್ಷಗಳಲ್ಲಿ ನಾಲ್ಕು ಸಂಸ್ಥೆಗಳು ಮತ್ತು ಗಣ್ಯರೊಬ್ಬರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರ (2015), ಅಕ್ಷಯ ಪಾತ್ರೆ ಪ್ರತಿಷ್ಠಾನ ಮತ್ತು ಸುಲಭ್‌ ಇಂಟರ್‌ನ್ಯಾಷನಲ್‌ ಸಂಸ್ಥೆ (2016), ಏಕಲ್‌ ಅಭಿಯಾನ್‌ ಟ್ರಸ್ಟ್‌ (2017) ಪ್ರತಿನಿಧಿಗಳು ಹಾಗೂ ಜಪಾನಿನ ಯೊಹೆ ಸಸಕಾವ (2018) ಅವರು ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿಯು ತಲಾ ₹1 ಕೋಟಿ ಒಳಗೊಂಡಿದೆ.

ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಕೆ ಮಾಡುವ ಅಕ್ಷಯ ಪಾತ್ರೆ ಪ್ರತಿಷ್ಠಾನದ ಅಧ್ಯಕ್ಷ ಮಧುಪಂಡಿತ್‌ ದಾಸ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

‘ಯಾವುದೇ ಮಗುವೂ ಹಸಿವಿನ ಕಾರಣಕ್ಕೆ ಶಿಕ್ಷಣದಿಂದ ವಂಚಿತವಾಗಬಾರದು. ಎಲ್ಲ ಮಕ್ಕಳಿಗೂ ಪೌಷ್ಟಿಕ ಆಹಾರ ಸಿಗಬೇಕು ಎಂಬುದು ಪ್ರತಿಷ್ಠಾನದ ಧ್ಯೇಯವಾಗಿದೆ’ ಎಂದು ಮಧುಪಂಡಿತ್‌ ದಾಸ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT