ಹೈದರಾಬಾದ್ : ಹೈದರಾಬಾದ್ನ ಬಂಡ್ಲಗುಡದಲ್ಲಿ ಗಣೇಶ ಮೂರ್ತಿಯನ್ನು ವಾಹನದಲ್ಲಿ ಪ್ರತಿಷ್ಠಾಪನೆಗೆಂದು ಸಾಗಿಸುವಾಗ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವುದಾಗಿ ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ರಾತ್ರಿ 1 ಗಂಟೆಯ ವೇಳೆಗೆ ಘಟನೆಯು ನಡೆದಿದೆ. ನಗರದ ಹೋಟೆಲ್ವೊಂದರ ಬಳಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲೆಂದು ಸಾಗಿಸುವಾಗ ಆಕಸ್ಮಿಕವಾಗಿ ನಡೆದಿದೆ ಎಂದು ಬಂಡ್ಲಗುಡ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ರಾಮನಾಥಪುರದ ಗೋಖಲೆ ನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಭಾನುವಾರ ರಾತ್ರಿ ನಡೆಯುತ್ತಿದ್ದ ಕೃಷ್ಣನ ಮೂರ್ತಿಯ ಮೆರವಣಿಗೆಯಲ್ಲಿ ರಥವು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಆರು ಮಂದಿ ಸಾವಿಗೀಡಾಗಿದ್ದಾರೆ. ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 10 ಮಂದಿ ರಥವನ್ನು ಎಳೆಯುತ್ತಿದ್ದರು. ರಸ್ತೆ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ರಥ ತಾಗಿದ್ದರಿಂದ ವಿದ್ಯುತ್ ಪ್ರವಹಿಸಿತ್ತು. ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಐವರು ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.